Daniel 8:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಚಿಕ್ಕ ಕೊಂಬು ನಿತ್ಯಹೋಮಗಳನ್ನು ತಡೆಯುವ ಪಾಪವನ್ನು ಮಾಡಿತು. ಅದು ಒಳ್ಳೆಯತನವನ್ನು (ಸತ್ಯ, ಧರ್ಮವನ್ನು) ನೆಲಕ್ಕೆ ತಳ್ಳಿತು. ಇದೆಲ್ಲವನ್ನು ಮಾಡಿ ಆ ಚಿಕ್ಕ ಕೊಂಬು ತನ್ನ ಇಷ್ಟಾರ್ಥವನ್ನು ಸಾಧಿಸುವದರಲ್ಲಿ ಜಯ ಪಡೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಪವಿತ್ರ ಸ್ಥಾನವನ್ನು ಕೆಡವಿ ನಿತ್ಯ ಹೋಮವನ್ನು ಅಡಗಿಸುವುದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ, ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.
Kannada BSI Bible 2016
ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಪವಿತ್ರಸ್ಥಾನವನ್ನು ಕೆಡವಿ ನಿತ್ಯಹೋಮವನ್ನು ಅಡಗಿಸುವದಕ್ಕೆ ನೀಚತನದಿಂದ ಒಂದು ಸೈನ್ಯವನ್ನಿಳಿಸಿ ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿ ತನ್ನ ಇಷ್ಟಾರ್ಥವನ್ನು ನೆರವೇರಿಸಿಕೊಂಡು ವೃದ್ಧಿಗೆ ಬಂತು.
Kannada Bible (KNCL) BSI 2016
ಆತನ ಪವಿತ್ರಾಲಯವನ್ನು ಕೆಡವಿತು. ಅನುದಿನದ ಬಲಿಯರ್ಪಣೆಯನ್ನು ಅಡಗಿಸುವುದಕ್ಕಾಗಿ ನೀಚತನದಿಂದ ಒಂದು ಸೈನ್ಯವನ್ನೆಬ್ಬಿಸಿತು. ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿತು. ತನ್ನ ಇಷ್ಟಾರ್ಥವನ್ನು ಈಡೇರಿಸಿಕೊಂಡು ವೃದ್ಧಿಗೆ ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿದಿನ ಯಜ್ಞದ ಸಂಗಡ ಯೆಹೋವ ದೇವರ ಸೈನ್ಯವೂ ಸಹ ಅಪರಾಧದ ನಿಮಿತ್ತವಾಗಿ ಅದಕ್ಕೆ ಕೊಡಲಾಯಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ, ಇಷ್ಟಾರ್ಥವನ್ನು ಪೂರೈಸಿಕೊಂಡು ಅನುಕೂಲ ಪಡೆಯಿತು, ವೃದ್ಧಿಗೆ ಬಂದಿತು.