Daniel 8:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಒಬ್ಬ ಪವಿತ್ರನು ಮಾತನಾಡುವದನ್ನು ಕೇಳಿದೆ. ಮತ್ತೊಬ್ಬ ಪವಿತ್ರನು ಮೊದಲನೆಯ ಪವಿತ್ರನಿಗೆ ಉತ್ತರಿಸುವದನ್ನೂ ಕೇಳಿದೆ. ಮೊದಲನೆಯ ಪವಿತ್ರನು, “ಈ ದರ್ಶನ ನಿತ್ಯಹೋಮಗಳಿಗೆ ಏನಾಗುವದೆಂಬುದನ್ನು ತೋರಿಸುವದು. ಇದು ಆ ಭಯಾನಕ ಪಾಪದ ಕುರಿತಾಗಿದೆ. ಅಧಿಪತಿಯು ಆರಾಧಿಸಲ್ಪಡುವ ಪವಿತ್ರಾಲಯವನ್ನು ಜನರು ಹಾಳುಮಾಡಿದರೆ, ಜನರು ಆ ಸ್ಥಳವನ್ನು ತುಳಿದಾಡಿದರೆ, ಆ ನಕ್ಷತ್ರಗಳ ಮೇಲೆ ಜನರು ನಡೆದಾಡಿದರೆ ಏನಾಗುವದೆಂಬುದನ್ನು ಇದು ತೋರಿಸಿಕೊಡುತ್ತದೆ. ಆದರೆ ಇದೆಲ್ಲ ಎಷ್ಟು ದಿನ ನಡೆಯುವದು?” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಒಬ್ಬ ದೇವದೂತನು ಮಾತನಾಡುವುದನ್ನು ಕೇಳಿದೆನು. ಮಾತನಾಡುವವನನ್ನು ಮತ್ತೊಬ್ಬ ದೇವದೂತನು, “ನಿತ್ಯಹೋಮವನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ, ದೇವಭಕ್ತ ಗಣವನ್ನು ತುಳಿಯುವುದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವುದು?” ಎಂದು ಪ್ರಶ್ನೆಮಾಡಿದನು.
Kannada BSI Bible 2016
ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಒಬ್ಬ ದೇವದೂತನು ಮಾತಾಡುವದನ್ನು ಕೇಳಿದೆನು; ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ - ನಿತ್ಯಹೋಮವನ್ನು ನಿಲ್ಲಿಸುವದು, ಭಯಂಕರವಾದ ದೇವದ್ರೋಹಮಾಡುವದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವದು ಎಂಬ ಕನಸಿನ ಕಾರ್ಯಗಳು ಎಷ್ಟು ಕಾಲ ನಡೆಯುವವು ಎಂದು ಪ್ರಶ್ನೆ ಮಾಡಲು
Kannada Bible (KNCL) BSI 2016
ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಒಬ್ಬ ಪರಿಶುದ್ಧನು ಮಾತನಾಡುವುದನ್ನು ಕೇಳಿದೆನು. ಮಾತನಾಡಿದ ಆತನಿಗೆ ಮತ್ತೊಬ್ಬ ಪರಿಶುದ್ಧನು, “ನಿತ್ಯ ಯಜ್ಞವನ್ನು ನಿಲ್ಲಿಸುವುದೂ, ಹಾಳುಮಾಡುವ ಅಪರಾಧವನ್ನು ತಡೆಯುವುದೂ, ಪರಿಶುದ್ಧ ಸ್ಥಳವನ್ನೂ, ಯೆಹೋವ ದೇವರ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವ ಈ ದರ್ಶನ ನೆರವೇರಲು ಎಷ್ಟು ಕಾಲ ಬೇಕಾಗುವುದು?” ಎಂದು ಕೇಳಿದನು.