Daniel 8:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇನ್ನೊಬ್ಬ ಪವಿತ್ರನು, “ಇದೆಲ್ಲಾ ಎರಡು ಸಾವಿರದ ಮುನ್ನೂರು ದಿನಗಳವರೆಗೆ ನಡೆಯುವುದು. ಆಮೇಲೆ ಪವಿತ್ರಾಲಯಕ್ಕೆ ಪುನಃ ನ್ಯಾಯ ಸಿಕ್ಕುವುದು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರ ರವರೆಗೆ ನಡೆಯುವವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವುದು” ಎಂದು ಹೇಳಿದನು.
Kannada BSI Bible 2016
ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇವನಿಗೆ - ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವವು; ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆಯಾಗುವದು ಎಂದು ಹೇಳಿದನು.
Kannada Bible (KNCL) BSI 2016
ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವುವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆ ಆಗುವುದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನನಗೆ, “ಎರಡು ಸಾವಿರದ ಮುನ್ನೂರು ಸಾಯಂಕಾಲ ಹಾಗೂ ಪ್ರಾತಃಕಾಲದವರೆಗೂ ನಡೆಯುವುವು. ಅನಂತರ ಪರಿಶುದ್ಧ ಸ್ಥಳವು ಪುನಃ ನ್ಯಾಯಸ್ಥಾಪನೆಯಾಗುವುದು,” ಎಂದು ಹೇಳಿದನು.