Daniel 8:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮನುಷ್ಯನಂತಿದ್ದ ಗಬ್ರಿಯೇಲನು ನಾನು ನಿಂತಲ್ಲಿಗೆ ಬಂದನು. ಅವನು ತೀರ ನನ್ನ ಹತ್ತಿರಕ್ಕೆ ಬಂದಾಗ ನನಗೆ ಬಹಳ ಭಯವಾಯಿತು. ನಾನು ನೆಲಕ್ಕೆ ಬಿದ್ದೆ. ಆದರೆ ಗಬ್ರಿಯೇಲನು ನನಗೆ, “ಮನುಷ್ಯನೇ, ಈ ದರ್ಶನ ಅಂತ್ಯಕಾಲದ ಕುರಿತಾಗಿದೆ ಎಂಬುದು ನಿನಗೆ ತಿಳಿದಿರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬರಲು, ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು. ನನಗೆ ಅವನು, “ನರಪುತ್ರನೇ, ಇದು ಮನದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು” ಎಂದು ಹೇಳಿದನು.
Kannada BSI Bible 2016
ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬರಲು ನಾನು ಭಯಭ್ರಾಂತನಾಗಿ ಅಡ್ಡಬಿದ್ದೆನು; ನನಗೆ ಅವನು - ನರಪುತ್ರನೇ, ಇದು ಮಂದಟ್ಟಾಗಿರಲಿ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂದು ಹೇಳಿದನು.
Kannada Bible (KNCL) BSI 2016
ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು.