Daniel 8:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ದರ್ಶನದಲ್ಲಿ ನಾನು ಶೂಷನ್ ನಗರದಲ್ಲಿದ್ದೆನು. ಶೂಷನ್ ನಗರವು ಏಲಾಮ್ ಸಂಸ್ಥಾನದ ರಾಜಧಾನಿಯಾಗಿತ್ತು. ನಾನು ಊಲಾ ನದಿಯ ದಡದ ಮೇಲೆ ನಿಂತುಕೊಂಡಿದ್ದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು. ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.
Kannada BSI Bible 2016
ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್‌ ಸೀಮೆ ಯಲ್ಲಿರುವ ಶೂಷನ್‌ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕಂಡ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿದ್ದೆನು; ಕನಸಿನಲ್ಲಿ ಊಲಾ ಕಾಲುವೆಯ ದಡದ ಮೇಲೆ ನಿಂತುಕೊಂಡಿದ್ದ ಹಾಗೆ ತೋರಿತು.
Kannada Bible (KNCL) BSI 2016
ಈ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿ ನಾನಿದ್ದೆ. ಊಲಾ ಕಾಲುವೆಯ ದಡದ ಮೇಲೆ ನಾನು ನಿಂತುಕೊಂಡಿದ್ದ ಹಾಗೆ ತೋರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು.