Daniel 8:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಕೊಂಬು ಮುರಿಯಿತು; ಅದರ ಸ್ಥಳದಲ್ಲಿ ನಾಲ್ಕು ಕೊಂಬುಗಳು ಮೊಳೆತವು. ಆ ನಾಲ್ಕು ಕೊಂಬುಗಳು ನಾಲ್ಕು ರಾಜ್ಯಗಳನ್ನು ಸೂಚಿಸುವವು. ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನ ರಾಷ್ಟ್ರದಿಂದ ಹುಟ್ಟುವವು. ಆದರೆ ಆ ನಾಲ್ಕು ರಾಜ್ಯಗಳು ಮೊದಲನೆಯ ಅರಸನಷ್ಟು ಶಕ್ತಿಶಾಲಿಯಾಗಿರುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನೆಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವುದಿಲ್ಲ.
Kannada BSI Bible 2016
ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕೊಂಬು ಮುರಿದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ ಆ ಜನಾಂಗದೊಳಗಿಂದ ನಾಲ್ಕು ರಾಜ್ಯಗಳು ಏಳುವವು; ಆದರೆ ಮೊದಲನೆಯ ರಾಜನಿಗೆ ಇದ್ದಷ್ಟು ಶಕ್ತಿಯು ಅವುಗಳಿಗೆ ಇರುವದಿಲ್ಲ.
Kannada Bible (KNCL) BSI 2016
ಆ ಕೊಂಬು ಮುರಿದುಹೋದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದಂತೆಯೆ ಆ ಜನಾಂಗದಿಂದ ನಾಲ್ಕು ರಾಜ್ಯಗಳು ಏಳುವುವು. ಆದರೆ ಮೊದಲನೇ ರಾಜನಿಗೆ ಇದ್ದಷ್ಟು ಶಕ್ತಿ ಅವುಗಳಿಗೆ ಇರುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕೊಂಬು ಮುರಿದುಹೋದ ಮೇಲೆ, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದಂತೆಯೇ, ಆ ಜನಾಂಗದಿಂದ ನಾಲ್ಕು ರಾಜ್ಯಗಳು ಉದಯಿಸುವುವು. ಆದರೆ ಮೊದಲನೆಯ ಅರಸನಿಗೆ ಇದ್ದಷ್ಟು ಅಧಿಕಾರ ಅವರಿಗೆ ಇರುವುದಿಲ್ಲ.