Daniel 8:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾನಿಯೇಲನೆಂಬ ನಾನು ಬಹಳ ಅಶಕ್ತನಾದೆನು. ಆ ದರ್ಶನದ ತರುವಾಯ ಹಲವಾರು ದಿವಸ ನಾನು ಕಾಯಿಲೆ ಬಿದ್ದೆನು. ಆಮೇಲೆ ನಾನು ಗುಣಹೊಂದಿ ರಾಜಕಾರ್ಯವನ್ನು ಪ್ರಾರಂಭಿಸಿದೆನು. ಆದರೆ ಆ ದರ್ಶನದಿಂದ ನನ್ನ ಮನಸ್ಸು ಕಲಕಿತು. ಆ ದರ್ಶನದ ಅರ್ಥವೇನೆಂಬುದು ನನಗೆ ತಿಳಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾನಿಯೇಲನಾದ ನಾನು ಮೂರ್ಛೆಹೋಗಿ, ಕೆಲವು ದಿನಗಳು ಕಾಯಿಲೆ ಬಿದ್ದೆನು. ಆ ಮೇಲೆ ಎದ್ದು ರಾಜಕಾರ್ಯವನ್ನು ನಡೆಸಿದೆನು. ಆ ಕನಸಿಗೆ ಬೆಚ್ಚಿಬೆರಗಾದೆನು. ಅದು ಯಾರಿಗೂ ತಿಳಿಯಲಿಲ್ಲ.
Kannada BSI Bible 2016
ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾನಿಯೇಲನಾದ ನಾನು ಬೆಂಡಾಗಿ ಕೆಲವು ದಿವಸ ಕಾಯಿಲೆಬಿದ್ದೆನು; ಆಮೇಲೆ ಎದ್ದು ರಾಜಕಾರ್ಯವನ್ನು ನಡಿಸಿದೆನು; ಆ ಕನಸಿಗೆ ಬೆಚ್ಚಿಬೆರಗಾದೆನು; ಅದು ಯಾರಿಗೂ ತಿಳಿಯಲಿಲ್ಲ.
Kannada Bible (KNCL) BSI 2016
ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ.