Daniel 8:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಕಣ್ಣೆತ್ತಿ ನೋಡಲಾಗಿ ಊಲಾ ನದಿಯ ಪಕ್ಕದಲ್ಲಿ ನಿಂತುಕೊಂಡಿದ್ದ ಟಗರೊಂದು ನನ್ನ ಕಣ್ಣಿಗೆ ಬಿತ್ತು. ಟಗರಿಗೆ ಎರಡು ಉದ್ದವಾದ ಕೊಂಬುಗಳಿದ್ದವು. ಆ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದು ಕೊಂಬು ಇನ್ನೊಂದು ಕೊಂಬಿಗಿಂತ ಉದ್ದವಾಗಿತ್ತು. ಉದ್ದವಾದ ಕೊಂಬು ಇನ್ನೊಂದು ಕೊಂಬಿಗಿಂತ ಹಿಂದಕ್ಕೆ ಇತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.
Kannada BSI Bible 2016
ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಕಣ್ಣೆತ್ತಿ ನೋಡಲು ಇಗೋ, ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿತ್ತು; ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದು, ಆ ದೊಡ್ಡದು ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.
Kannada Bible (KNCL) BSI 2016
ಕಣ್ಣೆತ್ತಿ ನೋಡಿದಾಗ ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿದ್ದು ಕಾಣಿಸಿತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಕಣ್ಣೆತ್ತಿ ನೋಡಿದಾಗ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ, ಇನ್ನೊಂದಕ್ಕಿಂತ ಒಂದು ಉದ್ದವಾಗಿದ್ದವು. ಆ ದೊಡ್ಡ ಕೊಂಬು ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.