Daniel 8:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಟಗರು ತನ್ನ ಕೊಂಬುಗಳಿಂದ ಎಲ್ಲ ಕಡೆಗೂ ಹಾಯುತ್ತಿತ್ತು. ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಜಿಗಿದಾಡುತ್ತಿತ್ತು. ಯಾವ ಪ್ರಾಣಿಗೂ ಆ ಟಗರನ್ನು ತಡೆಯಲಾಗಲಿಲ್ಲ. ಮಿಕ್ಕ ಪ್ರಾಣಿಗಳನ್ನು ರಕ್ಷಿಸುವುದು ಯಾರಿಂದಲೂ ಆಗಲಿಲ್ಲ. ಆ ಟಗರು ತನ್ನ ಮನಸ್ಸಿಗೆ ಬಂದಂತೆ ಮಾಡಲು ಸಾಧ್ಯವಾಯಿತು. ಆ ಟಗರು ಬಹಳ ಪ್ರಬಲವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.
Kannada BSI Bible 2016
ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನೋಡುತ್ತಿದ್ದ ಹಾಗೆ ಆ ಟಗರು ಪಡುವಲಿಗೂ ಬಡಗಲಿಗೂ ತೆಂಕಲಿಗೂ ಹಾದಾಡುತ್ತಿತ್ತು; ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು; ಅದರ ಕೈಯಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ; ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.
Kannada Bible (KNCL) BSI 2016
ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿತ್ತು. ಯಾವ ಪ್ರಾಣಿಯೂ ಅದರ ಎದುರಿಗೆ ನಿಲ್ಲಲಾರದೆಹೋಯಿತು. ಅದರ ಕೈಯಿಂದ ಬಿಡಿಸಲು ಯಾವ ಮೃಗಕ್ಕೂ ಶಕ್ತಿಯಿರಲಿಲ್ಲ. ಅದು ಇಷ್ಟಬಂದಂತೆ ನಡೆದು ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು.