Daniel 8:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೋತವು ಟಗರಿನ ಕಡೆಗೆ ಓಡುವದನ್ನು ನಾನು ನೋಡುತ್ತಿದ್ದೆ. ಅದು ಅತಿ ಕೋಪದಿಂದ ಟಗರಿನ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಟಗರಿಗೆ ಆ ಹೋತವನ್ನು ತಡೆದು ನಿಲ್ಲಿಸಲಾಗಲಿಲ್ಲ. ಆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು. ಟಗರನ್ನು ಹೋತದಿಂದ ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ, ಅದರ ಮೇಲಣ ಕ್ರೋಧದಿಂದ ಉರಿಯುತ್ತಾ, ಅದರ ಮೇಲೆ ಹಾಯ್ದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದಕ್ಕೆ ಎದುರು ಬೀಳಲು ಟಗರಿಗೆ ಶಕ್ತಿಯಿರಲಿಲ್ಲ. ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದು ಹಾಕಿತು. ಟಗರನ್ನು ಹೋತದಿಂದ ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.
Kannada BSI Bible 2016
ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ನನ್ನ ಕನಸಿನಲ್ಲಿ ಟಗರನ್ನು ಸಮೀಪಿಸಿ ಅದರ ಮೇಲಣ ಕ್ರೋಧದಿಂದುರಿಯುತ್ತಾ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು; ಅದಕ್ಕೆ ಎದುರುಬೀಳಲು ಟಗರಿಗೆ ಏನೂ ಶಕ್ತಿಯಿರಲಿಲ್ಲ; ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿದುಹಾಕಿತು; ಟಗರನ್ನು ಅದರ ಕೈಯಿಂದ ಬಿಡಿಸುವ ಪ್ರಾಣಿ ಯಾವದೂ ಇರಲಿಲ್ಲ;
Kannada Bible (KNCL) BSI 2016
ಆ ಟಗರನ್ನು ಸಮೀಪಿಸುವುದನ್ನು ನಾನು ಗಮನಿಸಿದೆ. ಟಗರಿನ ವಿರುದ್ಧ ಮಹಾರೌದ್ರದಿಂದ ಉರಿಯುತ್ತಾ ಅದರ ಮೇಲೆ ಎರಗಿ ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದನ್ನು ಎದುರಿಸುವ ಶಕ್ತಿ ಯಾವುದೂ ಆ ಟಗರಿಗೆ ಇರಲಿಲ್ಲ. ಹೋತ ಟಗರನ್ನು ನೆಲಕ್ಕೆ ಕೆಡವಿ ತುಳಿದುಹಾಕಿತು. ಅದರ ಕೈಯಿಂದ ಟಗರನ್ನು ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಟಗರಿನ ಹತ್ತಿರ ಬರುವುದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು, ಅದರ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಅದರ ಮುಂದೆ ನಿಲ್ಲುವುದಕ್ಕೆ ಟಗರಿಗೆ ಏನೂ ಶಕ್ತಿಯಿರಲಿಲ್ಲ. ಆದರೆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಹೋತದ ಹಿಡಿತದಿಂದ ಬಿಡಿಸುವವರು ಯಾರೂ ಇರಲಿಲ್ಲ.