Daniel 8:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವುಗಳಿಂದ ಒಂದು ಚಿಕ್ಕ ಕೊಂಬು ಮೊಳೆಯಿತು. ಆ ಚಿಕ್ಕ ಕೊಂಬು ಬೆಳೆದು ಬಹಳ ದೊಡ್ಡದಾಯಿತು. ಅದು ಆಗ್ನೇಯಕ್ಕೆ ಬೆಳೆಯಿತು. ಅದು ದಕ್ಷಿಣಕ್ಕೆ, ಪೂರ್ವಕ್ಕೆ ಮತ್ತು ಸುಂದರವಾದ ನಾಡಿಗೆ ಬೆಳೆಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.
Kannada BSI Bible 2016
ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ತೆಂಕಲಲ್ಲಿಯೂ ಮೂಡಲಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.
Kannada Bible (KNCL) BSI 2016
ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು, ಬಹುದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ಚೆಲುವಿನ ನಾಡಾದ ಪಾಲೆಸ್ತೀನಿನ ಕಡೆಗೂ ಪ್ರಬಲಗೊಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ, ಪೂರ್ವದ ಕಡೆಗೂ, ರಮ್ಯ ದೇಶದ ಕಡೆಗೂ ಪ್ರಬಲವಾಯಿತು.