Daniel 9:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಂದು ನಡೆದ ಸಂಗತಿಗಳಿವು: ದಾರ್ಯಾವೆಷನು ಅಹಷ್ವೇರೋಷನೆಂಬವನ ಮಗನು. ದಾರ್ಯವೆಷನು ಮೇದ್ಯಯ ವಂಶದವನು. ಅವನು ಕಸ್ದೀಯ ರಾಜ್ಯದ ದೊರೆಯಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಷ್ವೇರೋಷನ ಮಗನೂ, ಮೇದ್ಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,
Kannada BSI Bible 2016
ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ಅರ ಸನೂ ಆದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ
Kannada Bible (KNCL) BSI 2016
ಅದು, ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ. ಈತನು ಅಹಷ್ವೇರೋಷನ ಮಗ, ಮೇದ್ಯ ವಂಶದವನು ಹಾಗು ಬಾಬಿಲೋನಿನ ರಾಜ್ಯದ ದೊರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಆದ ದಾರ್ಯಾವೆಷನ ಆಳ್ವಿಕೆಯ ಪ್ರಥಮ ವರ್ಷದಲ್ಲಿ ಬಾಬಿಲೋನ್ ರಾಜ್ಯದ ಮೇಲೆ ಅಧಿಕಾರಿಯಾಗಿದ್ದಾಗ,