Daniel 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ಜನರಲ್ಲಿ ಒಬ್ಬರೂ ಸಹ ನಿನ್ನ ಉಪದೇಶವನ್ನು ಪಾಲಿಸಲಿಲ್ಲ. ಅವರೆಲ್ಲರೂ ಅದರಿಂದ ದೂರಾದರು. ಅವರು ನಿನ್ನ ಆಜ್ಞೆಯನ್ನು ಪಾಲಿಸಲಿಲ್ಲ. ಮೋಶೆಯ ಧರ್ಮಶಾಸ್ತ್ರದಲ್ಲಿ ಶಾಪಗಳ ಮತ್ತು ವಾಗ್ದಾನಗಳ ಬಗ್ಗೆ ಹೇಳಲಾಗಿದೆ. (ಮೋಶೆಯು ದೇವರ ಸೇವಕನಾಗಿದ್ದನು) ಆ ಶಾಪಗಳು ಧರ್ಮಶಾಸ್ತ್ರವನ್ನು ಪಾಲಿಸದಿದ್ದವರಿಗೆ ಆಗುವ ಶಿಕ್ಷೆಯಾಗಿದೆ. ಆ ಎಲ್ಲಾ ಶಿಕ್ಷೆಗಳು ನಮಗೆ ಆಗಿವೆ. ನಾವು ಯೆಹೋವನಾದ ನಿನ್ನ ವಿರುದ್ಧ ಪಾಪ ಮಾಡಿದ್ದರಿಂದ ನಮಗೆ ಹೀಗಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿನ್ನ ಶಾಪದ ಕೇಡುಗಳೂ, ದೇವಸೇವಕನಾದ ಮೋಶೆಯ ಧರ್ಮನಿಯಮದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವ ದ್ರೋಹಿಗಳೇ ಸರಿ.
Kannada BSI Bible 2016
ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು; ಆದಕಾರಣ ನಿನ್ನ ಶಾಪದ ಕೇಡುಗಳೂ ದೇವಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವದ್ರೋಹಿಗಳೇ ಸರಿ.
Kannada Bible (KNCL) BSI 2016
ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.