Daniel 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ತಿಳಿದುಕೊಳ್ಳಬಯಸಿದ ವಿಷಯಗಳನ್ನು ತಿಳಿದುಕೊಳ್ಳಲು ಗಬ್ರಿಯೇಲನು ನನಗೆ ಸಹಾಯ ಮಾಡಿದನು. ಗಬ್ರಿಯೇಲನು, “ದಾನಿಯೇಲನೇ, ನಾನು ನಿನಗೆ ಜ್ಞಾನವನ್ನು ಕೊಡಲು ಮತ್ತು ಅರ್ಥಮಾಡಿಕೊಳ್ಳಲು ನಿನಗೆ ಸಹಾಯ ಮಾಡಲು ಬಂದಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನ್ನೊಂದಿಗೆ ಹೀಗೆ ಮಾತನಾಡಿ ಉಪದೇಶಿಸಿದನು, “ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವುದಕ್ಕೆ ಈಗ ಬಂದೆನು.
Kannada BSI Bible 2016
ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನೊಂದಿಗೆ ಹೀಗೆ ಮಾತಾಡಿ ಉಪದೇಶಿಸಿದನು - ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವದಕ್ಕೆ ಈಗ ಬಂದೆನು;
Kannada Bible (KNCL) BSI 2016
“ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡಲು ಈಗ ಬಂದಿದ್ದೇನೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನಗೆ, “ದಾನಿಯೇಲನೇ, ನಿನಗೆ ವಿವೇಕವನ್ನೂ, ಬುದ್ಧಿಯನ್ನೂ ಕೊಡುವುದಕ್ಕೆ ಈಗ ನಾನು ಬಂದಿದ್ದೇನೆ.