Deuteronomy 1:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಈ ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.
Kannada BSI Bible 2016
ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯ,
Kannada Bible (KNCL) BSI 2016
ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಲ್ವತ್ತನೆಯ ವರ್ಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿನದಲ್ಲಿ, ಮೋಶೆಯು ಇಸ್ರಾಯೇಲರಿಗೆ, ಯೆಹೋವ ದೇವರು ಅವನಿಗೆ ಅವರ ವಿಷಯವಾಗಿ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾತನಾಡಿದನು.