Deuteronomy 1:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.
Kannada BSI Bible 2016
ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಒಳ್ಳೇದು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು; ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.
Kannada Bible (KNCL) BSI 2016
ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸೆರೆಯಾಗಿ ಹೋಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈ ಹೊತ್ತು ಒಳ್ಳೆಯದು, ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳು ಅದರಲ್ಲಿ ಪ್ರವೇಶಿಸುವರು. ನಾನು ಅವರಿಗೆ ಅದನ್ನು ಕೊಡುವೆನು, ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.