Deuteronomy 1:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆಗ ನೀವು ಹೀಗೆ ಹೇಳಿದಿರಿ: ‘ಮೋಶೆಯೇ, ನಾವು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದೆವು. ದೇವರಾದ ಯೆಹೋವನು ನಮಗೆ ಆಜ್ಞೆಮಾಡಿದ ಪ್ರಕಾರ ನಾವು ಈಗ ಹೋಗಿ ಅವರೊಂದಿಗೆ ಯುದ್ಧಮಾಡುತ್ತೇವೆ.’ ಆಮೇಲೆ ನೀವು ಪ್ರತಿಯೊಬ್ಬರೂ ಆಯುಧಗಳನ್ನು ಧರಿಸಿಕೊಂಡಿರಿ. ಬೆಟ್ಟಪ್ರದೇಶಗಳನ್ನು ಜಯಿಸುವುದು ಸುಲಭವೆಂದು ನೀವು ಭಾವಿಸಿದ್ದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ನೀವು, “ನಾವು ಯೆಹೋವನಿಗೆ ದ್ರೋಹಿಗಳಾದೆವು. ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು” ಎಂದು ಉತ್ತರಕೊಟ್ಟಿರಿ. ಮತ್ತು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು, ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.
Kannada BSI Bible 2016
ನೀವು ಉತ್ತರ ಕೊಟ್ಟು ನನಗೆ--ಕರ್ತನಿಗೆ ಪಾಪ ಮಾಡಿದ್ದೇವೆ; ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ನಾವು ಹೋಗಿ ಯುದ್ಧ ಮಾಡುತ್ತೇವೆ ಅಂದಿರಿ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ತೆಗೆದುಕೊಂಡ ಮೇಲೆ ಬೆಟ್ಟಕ್ಕೆ ಹೋಗುವದು ಸಣ್ಣಕೆಲಸವೆಂದು ನೆನಸಿದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ನೀವು - ನಾವು ಯೆಹೋವನಿಗೆ ದ್ರೋಹಿಗಳಾದೆವು; ಆದರೂ ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಾವೇ ಈಗ ಆ ಬೆಟ್ಟದ ಸೀಮೆಯನ್ನು ಹತ್ತಿ ಯುದ್ಧಮಾಡುವೆವು ಎಂದು ಉತ್ತರ ಕೊಟ್ಟು ನೀವೆಲ್ಲರೂ ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು ಆ ಬೆಟ್ಟದ ಸೀಮೆಯನ್ನು ಹತ್ತಿ ಜಯಿಸುವದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವದಕ್ಕಿದ್ದಿರಿ.
Kannada Bible (KNCL) BSI 2016
“ಅದಕ್ಕೆ ನೀವು, ‘ನಾವು ಸರ್ವೇಶ್ವರನಿಗೆ ದ್ರೋಹಿಗಳಾದೆವು; ಆದರೂ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ನಾವೇ ಈಗ ಆ ಮಲೆನಾಡನ್ನು ಹತ್ತಿ ಯುದ್ಧಮಾಡುತ್ತೇವೆ,’ ಎಂದು ಉತ್ತರಕೊಟ್ಟಿರಿ; ನೀವೆಲ್ಲರು ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು ಆ ಮಲೆನಾಡನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ಉತ್ತರಕೊಟ್ಟು ನನಗೆ, “ಯೆಹೋವ ದೇವರಿಗೆ ಪಾಪಮಾಡಿದ್ದೇವೆ. ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ನಾವು ಬೆಟ್ಟವನ್ನು ಹತ್ತಿ ಯುದ್ಧ ಮಾಡುತ್ತೇವೆ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಮೇಲೆ ಬೆಟ್ಟಕ್ಕೆ ಹೊರಟುಹೋಗುವುದು ಸಣ್ಣ ಕೆಲಸ,” ಎಂದು ಹೇಳಿದಿರಿ.