Deuteronomy 10:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ನಿಮ್ಮ ಪೂರ್ವಿಕರನ್ನು ಎಷ್ಟು ಪ್ರೀತಿಮಾಡಿದ್ದನೆಂದರೆ, ಅವರ ಸಂತಾನದವರಾದ ನಿಮ್ಮನ್ನು ತನ್ನ ಜನರನ್ನಾಗಿ ಆರಿಸಿಕೊಳ್ಳುವಷ್ಟು ಪ್ರೀತಿಸಿದನು; ಬೇರೆ ಜನಾಂಗದವರ ಬದಲಾಗಿ ನಿಮ್ಮನ್ನೇ ಆರಿಸಿಕೊಂಡನು. ನೀವು ಇಂದಿಗೂ ಆತನಿಂದ ಆರಿಸಲ್ಪಟ್ಟ ಜನರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.
Kannada BSI Bible 2016
ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಆತನು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆದುಕೊಂಡನು.
Kannada Bible (KNCL) BSI 2016
ಆದರೂ ಅವರು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವರಾಗಿ ಅವರನ್ನು ಪ್ರೀತಿಸಿದರು. ಈಗ ನಿಮ್ಮ ಅನುಭವಕ್ಕೆ ಬಂದಿರುವಂತೆ, ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲ ಜನಾಂಗಗಳಿಂದ ಆರಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಪಿತೃಗಳ ಮೇಲೆ ಯೆಹೋವ ದೇವರು ತಾವೇ ಮನಸ್ಸಿಟ್ಟು, ಅವರನ್ನು ಪ್ರೀತಿಸಿ, ಅವರ ಸಂತಾನವಾಗಿರುವ ನಿಮ್ಮನ್ನು ಈ ಹೊತ್ತು ಇರುವ ಪ್ರಕಾರ ಎಲ್ಲಾ ಜನರೊಳಗಿಂದ ಆರಿಸಿಕೊಂಡರು.