Deuteronomy 10:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನನ್ನು ಮಾತ್ರ ನೀವು ಸ್ತುತಿಸಬೇಕು. ಆತನೇ ನಿಮ್ಮ ದೇವರು. ಆತನು ನಿಮಗಾಗಿ ಭಯಂಕರವಾದ ಮಹತ್ಕಾರ್ಯಗಳನ್ನು ಮಾಡಿದ್ದಾನೆ. ಅವುಗಳನ್ನು ನೀವು ಕಣ್ಣಾರೆ ಕಂಡಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.
Kannada BSI Bible 2016
ನಿನ್ನ ಕಣ್ಣುಗಳು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿನಗೆ ಮಾಡಿದ ಆತನೇ ನಿನ್ನ ಸ್ತೋತ್ರವು, ಆತನೇ ನಿನ್ನ ದೇವರು.ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನೊಬ್ಬನೇ ನಿಮ್ಮ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು. ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.
Kannada Bible (KNCL) BSI 2016
ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿಮಗೆ ಮಾಡಿದ ಅವರೇ ನಿಮ್ಮ ಸ್ತೋತ್ರವು. ಅವರೇ ನಿಮ್ಮ ದೇವರು.