Deuteronomy 10:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಪೂರ್ವಿಕರು ಈಜಿಪ್ಟಿಗೆ ಹೋದಾಗ ಅವರಲ್ಲಿ ಕೇವಲ ಎಪ್ಪತ್ತು ಮಂದಿ ಮಾತ್ರ ಇದ್ದರು. ಆದರೆ ನಿಮ್ಮ ದೇವರಾದ ಯೆಹೋವನು ಆಕಾಶದಲ್ಲಿರುವ ನಕ್ಷತ್ರಗಳಂತೆ ನಿಮ್ಮನ್ನು ಅನೇಕಾನೇಕ ಜನರನ್ನಾಗಿ ಮಾಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.
Kannada BSI Bible 2016
ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಪಿತೃಗಳು ಎಪ್ಪತ್ತು ಮಂದಿ ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗಲೋ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನಲ್ಲಾ.
Kannada Bible (KNCL) BSI 2016
ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಪ್ಪತ್ತು ಮಂದಿಯಾಗಿ ನಿಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡಿದ್ದಾರೆ.