Deuteronomy 10:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಬೆಟ್ಟದಿಂದಿಳಿದು ಆ ಕಲ್ಲಿನ ಹಲಗೆಗಳನ್ನು ಯೆಹೋವನ ಅಪ್ಪಣೆಯಂತೆ ನಾನು ಮಾಡಿದ ಪೆಟ್ಟಿಗೆಯೊಳಗಿಟ್ಟೆನು. ಆ ಕಲ್ಲಿನ ಹಲಗೆಗಳು ಈಗಲೂ ಇವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.
Kannada BSI Bible 2016
ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಆ ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಅವೆ.
Kannada Bible (KNCL) BSI 2016
ಸರ್ವೇಶ್ವರ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದೆ; ನನ್ನಿಂದ ಸಿದ್ಧ ಆಗಿದ್ದ ಮಂಜೂಷದಲ್ಲಿ ಅವರ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆ; ಅವು ಇಂದಿನವರೆಗೂ ಅದರಲ್ಲೇ ಇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ನಾನು ಬೆಟ್ಟದಿಂದ ಇಳಿದುಬಂದು, ಆ ಹಲಗೆಗಳನ್ನು ಯೆಹೋವ ದೇವರು ನನಗೆ ಆಜ್ಞಾಪಿಸಿದ ಹಾಗೆ ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಅವು ಅಲ್ಲಿಯೇ ಇರುತ್ತವೆ.