Deuteronomy 10:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ಯೆಹೋವನು ಲೇವಿಕುಲದವರನ್ನು ಒಂದು ವಿಶೇಷವಾದ ಕೆಲಸಕ್ಕಾಗಿ ಬೇರೆ ಕುಲಗಳವರಿಂದ ಪ್ರತ್ಯೇಕಿಸಿದನು. ಅವರಿಗೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿಕೊಂಡು ಹೋಗುವ ಕೆಲಸ ಕೊಡಲ್ಪಟ್ಟಿತು. ಯೆಹೋವನ ಸನ್ನಿಧಾನದಲ್ಲಿ ಅವರು ಯಾಜಕರ ಕೆಲಸವನ್ನು ಮಾಡಿದರು. ಅಲ್ಲದೆ ಯೆಹೋವನ ಜನರಿಗೆ ದೇವರ ಆಶೀರ್ವಾದ ವಚನಗಳನ್ನು ಹೇಳುವ ಕೆಲಸವನ್ನು ಅವರು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
Kannada BSI Bible 2016
ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.
Kannada Bible (KNCL) BSI 2016
“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.