Deuteronomy 11:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಲಕಾಲಕ್ಕೆ ಸರಿಯಾಗಿ ನಿಮ್ಮ ದೇಶಕ್ಕೆ ನಾನು ಮಳೆಯನ್ನು ಕಳುಹಿಸುತ್ತೇನೆ. ಹಿಂಗಾರು, ಮುಂಗಾರು ಮಳೆ ತಕ್ಕ ಸಮಯದಲ್ಲಿ ಬೀಳುವುದು. ಆಗ ನೀವು ನಿಮ್ಮ ಧಾನ್ಯಗಳನ್ನು, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಶೇಖರಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.
Kannada BSI Bible 2016
ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಗೋದಿ, ದ್ರಾಕ್ಷೆ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂವಿುಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಸರಿಯಾಗಿ ನಡಿಸುವನು;
Kannada Bible (KNCL) BSI 2016
ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಆಗುವುದು. ನಿಮ್ಮ ಭೂಮಿಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಅವರು ಸರಿಯಾಗಿ ಸುರಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು.