Deuteronomy 11:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಳ್ಳುವನು; ಆಕಾಶವನ್ನು ಮುಚ್ಚಿ ಮಳೆಬೀಳದಂತೆ ಮಾಡುವನು. ಆಗ ಹೊಲದಲ್ಲಿ ಧಾನ್ಯ ಬೆಳೆಯುವುದಿಲ್ಲ. ಆಗ ಆತನು ಕೊಡುವ ಒಳ್ಳೆಯ ದೇಶದಲ್ಲಿಯೇ ಊಟಕ್ಕಿಲ್ಲದೆ ಸಾಯುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.
Kannada BSI Bible 2016
ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂವಿುಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.
Kannada Bible (KNCL) BSI 2016
ಅವರು ನಿಮ್ಮ ಮೇಲೆ ಸಿಟ್ಟಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಡಬಹುದು. ಆಗ ಭೂಮಿಯಲ್ಲಿ ಬೆಳೆಯಾಗದೆ ಸರ್ವೇಶ್ವರ ನಿಮಗೆ ಕೊಡುವ ಆ ಉತ್ತಮನಾಡಿನಲ್ಲಿ ನೀವು ಉಳಿಯದೆ ಬೇಗ ನಾಶವಾಗಿಹೋಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ.