Deuteronomy 11:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಹೇಳಿದ ಆಜ್ಞೆಗಳನ್ನು ಯಾವಾಗಲೂ ಜ್ಞಾಪಕದಲ್ಲಿಡಿರಿ. ಅದನ್ನು ನಿಮ್ಮ ಹೃದಯದಲ್ಲಿಡಿರಿ. ಅವುಗಳನ್ನು ಬರೆದು ಕೈಗಳಲ್ಲಿ ಮತ್ತು ಹಣೆಯ ಮೇಲೆ ಕಟ್ಟಿರಿ. ಇದು ನಿಮಗೆ ಜ್ಞಾಪಕ ಕೊಡುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.
Kannada BSI Bible 2016
ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹುಬ್ಬುಗಳ ನಡುವೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.
Kannada Bible (KNCL) BSI 2016
“ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ.