Deuteronomy 11:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀವು ಹೋಗುವ ದೇಶದಲ್ಲಿ ವಾಸಿಸುವ ಜನರನ್ನು ಯೆಹೋವನಾದ ನಾನು ಹೊಡೆದೋಡಿಸುವೆನು. ಆ ಜನಾಂಗ ನಿಮಗಿಂತಲೂ ದೊಡ್ಡದು ಮತ್ತು ಬಲಿಷ್ಠವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.
Kannada BSI Bible 2016
ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು; ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
Kannada Bible (KNCL) BSI 2016
ಅವರು ಆ ಜನಾಂಗಗಳನ್ನೆಲ್ಲ ನಿಮ್ಮ ಬಳಿಯಿಂದ ಹೊರದೂಡುವರು; ನಿಮಗಿಂತಲೂ ಮಹಾಬಲಿಷ್ಠಜನಾಂಗಗಳ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವರು. ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನಮಾಡಿಕೊಳ್ಳುವಿರಿ.