Deuteronomy 11:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ವಿರುದ್ಧವಾಗಿ ಯಾರೂ ನಿಂತುಕೊಳ್ಳಲಾರರು. ನೀವು ಆಕ್ರಮಿಸಿಕೊಳ್ಳುವ ಪ್ರದೇಶದಲ್ಲೆಲ್ಲಾ ಯೆಹೋವನು ಅಲ್ಲಿಯ ಜನರು ನಿಮಗೆ ಭಯಪಡುವಂತೆ ಮಾಡುವನು. ಯೆಹೋವನು ಈ ವಾಗ್ದಾನವನ್ನು ನಿಮಗೆ ಮೊದಲೇ ಕೊಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.
Kannada BSI Bible 2016
ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರೂ ನಿಮ್ಮ ಮುಂದೆ ನಿಲ್ಲುವದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿವ್ಮಿುಂದ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.
Kannada Bible (KNCL) BSI 2016
ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ನೀವು ಕಾಲಿಡುವ ಎಲ್ಲ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಹೆದರಿಕೆಯೂ ಉಂಟಾಗುವ ಹಾಗೆ ನಿಮ್ಮ ದೇವರಾದ ಸರ್ವೇಶ್ವರ ತಾನೇ ಹೇಳಿರುವಂತೆ ಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು.