Deuteronomy 11:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರಾದ ಯೆಹೋವನು ನಿಮ್ಮನ್ನು ನಿಮ್ಮ ದೇಶಕ್ಕೆ ನಡೆಸುವನು. ನೀವು ಬೇಗನೆ ಅದನ್ನು ಸ್ವಾಧೀನ ಮಾಡಿಕೊಳ್ಳುವಿರಿ. ಆ ಸಮಯದಲ್ಲಿ ನೀವು ಗೆರಿಜ್ಜೀಮ್ ಬೆಟ್ಟದ ತುದಿಗೇರಿ ಅಲ್ಲಿಂದ ಆಶೀರ್ವಾದ ವಚನಗಳನ್ನು ನುಡಿಯಿರಿ. ಅನಂತರ ನೀವು ಎಬಾಲ್ ಬೆಟ್ಟದ ಮೇಲೇರಿ ಅಲ್ಲಿಂದ ಜನರಿಗೆ ಶಾಪವಚನಗಳನ್ನು ನುಡಿಯಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.
Kannada BSI Bible 2016
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.
Kannada Bible (KNCL) BSI 2016
“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರವೇಶಿಸುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೇರಿಸಿದಾಗ, ನೀವು ಗೆರಿಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.