Deuteronomy 12:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಜೋರ್ಡನ್ ನದಿಯನ್ನು ದಾಟಿ, ಯೆಹೋವನು ನಿಮಗೆ ಕೊಡುವ ದೇಶದಲ್ಲಿ ವಾಸಿಸುವಿರಿ. ನಿಮ್ಮ ಎಲ್ಲಾ ವೈರಿಗಳಿಂದ ತಪ್ಪಿಸಿ ದೇವರು ನಿಮಗೆ ಸಮಾಧಾನವನ್ನು ಅನುಗ್ರಹಿಸುವನು; ನೀವು ಅಲ್ಲಿ ಸುರಕ್ಷಿತವಾಗಿರುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ಯೊರ್ದನ್ ನದಿಯನ್ನು ದಾಟಿ, ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ, ನಿಮ್ಮ ಸುತ್ತಲೂ ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ,
Kannada BSI Bible 2016
ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ಆ ದೇಶದಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಯೆಹೋವನು ಮಾಡಿದ್ದರಿಂದ ನೀವು ನಿರ್ಭಯವಾಗಿರುವ ಕಾಲದಲ್ಲಿ
Kannada Bible (KNCL) BSI 2016
ಆದರೆ ನೀವು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸೊತ್ತಾಗಿ ಕೊಡುವ ಆ ನಾಡಿನಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಸರ್ವೇಶ್ವರ ಮಾಡುವರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಯೊರ್ದನ್ ನದಿಯನ್ನು ದಾಟಿದ ಮೇಲೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ, ದೇವರು ಸುತ್ತಲಿರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡುವರು.