Deuteronomy 12:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ನಿಮ್ಮ ಸ್ಥಳಗಳಲ್ಲಿ ವಾಸಿಸುವಾಗ ಅಲ್ಲಿರುವ ಜಿಂಕೆ, ಟಗರು ಇತ್ಯಾದಿ ಶುದ್ಧ ಪ್ರಾಣಿಗಳನ್ನು ಕೊಂದು ತಿನ್ನಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವಷ್ಟು ಮಾಂಸದಲ್ಲಿ ಎಷ್ಟುಬೇಕಾದರೂ ತಿನ್ನಿರಿ. ಶುದ್ಧರೂ ಅಶುದ್ಧರೂ ಯಾರು ಬೇಕಾದರೂ ಆ ಮಾಂಸವನ್ನು ತಿನ್ನಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಮತ್ತು ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.
Kannada BSI Bible 2016
ಆದರೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿನಗೆ ಮನಸ್ಸಿದ್ದಷ್ಟು ಮಾಂಸವನ್ನು ನಿನ್ನ ಎಲ್ಲಾ ಬಾಗಲುಗಳಲ್ಲಿ ಕೊಯ್ದು ತಿನ್ನಬಹುದು; ಜಿಂಕೆ ಕಡವೆ ಗಳ ಹಾಗೆಯೇ ಶುದ್ಧನೂ ಅಶುದ್ಧನೂ ಅದನ್ನು ತಿನ್ನ ಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ಎಲ್ಲಾ ಊರುಗಳಲ್ಲಿಯೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸಿದ ಮೇರೆಗೆ ಪಶುಗಳನ್ನು ಇಷ್ಟಾನುಸಾರವಾಗಿ ಕೊಯಿದು ಊಟಮಾಡಬಹುದು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.
Kannada Bible (KNCL) BSI 2016
ಆದರೆ ನೀವು ಎಲ್ಲ ಊರುಗಳಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಅಭಿವೃದ್ಧಿಪಡಿಸುವ ಮೇರೆಗೆ ಪಶುಪ್ರಾಣಿಗಳನ್ನು ಇಷ್ಟಾನುಸಾರ ಕೊಯ್ದು ಊಟಮಾಡಬಹುದು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿಮ್ಮ ಇಷ್ಟಾನುಸಾರ ಮಾಂಸಾಹಾರವನ್ನು ನಿಮ್ಮ ಎಲ್ಲಾ ಊರುಗಳಲ್ಲಿ ತಿನ್ನಬಹುದು. ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.