Deuteronomy 12:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ವಾಸಿಸುವ ಆ ಸ್ಥಳದಲ್ಲಿ ಕೆಲವನ್ನು ತಿನ್ನಕೂಡದು. ಅವು ಯಾವುವೆಂದರೆ: ದೇವರಿಗೆ ಮೀಸಲಿಟ್ಟ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಯ ಪಾಲು; ದೇವರಿಗೆ ಸಮರ್ಪಿಸಲು ಇಟ್ಟಿರುವ ಚೊಚ್ಚಲ ಪಶುಗಳು ಮತ್ತು ಹಿಂಡಿನ ಮರಿಗಳು, ನೀವು ಹರಕೆ ಹೊತ್ತುಕೊಂಡ ಕಾಣಿಕೆಗಳು ಮತ್ತು ದೇವರಿಗಾಗಿ ಮೀಸಲಿಟ್ಟಿದ್ದ ವಸ್ತುಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
Kannada BSI Bible 2016
ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳ ಚೊಚ್ಚಲಾದವುಗಳನ್ನೂ ನೀನು ಮಾಡುವ ಎಲ್ಲಾ ಪ್ರಮಾಣಗಳನ್ನೂ ಉಚಿತ ವಾದ ಕಾಣಿಕೆಗಳನ್ನೂ ಕೈ ಎತ್ತುವ ಅರ್ಪಣೆಯನ್ನೂ ನಿನ್ನ ಬಾಗಲುಗಳಲ್ಲಿ ತಿನ್ನಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಧಾನ್ಯ, ದ್ರಾಕ್ಷೆ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ಹರಕೆಮಾಡಿದ ಪದಾರ್ಥಗಳನ್ನೂ ಕಾಣಿಕೆಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
Kannada Bible (KNCL) BSI 2016
“ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನು, ದನಕುರಿಗಳ ಚೊಚ್ಚಲು ಮರಿಗಳನ್ನು, ಹರಕೆಮಾಡಿದ ಪದಾರ್ಥಗಳನ್ನು, ಕಾಣಿಕೆಗಳನ್ನು ಹಾಗು ಯಾಜಕರಿಗಾಗಿ ಪ್ರತ್ಯೇಕಿಸಿದ ಪದಾರ್ಥಗಳನ್ನು ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆಗಳ ದಶಮಾಂಶವನ್ನೂ, ನಿಮ್ಮ ದನಕುರಿಗಳ ಚೊಚ್ಚಲಾದವುಗಳನ್ನೂ, ನೀವು ಮಾಡುವ ಎಲ್ಲಾ ಹರಕೆಯ ಪದಾರ್ಥಗಳನ್ನೂ, ನಿಮ್ಮ ಉಚಿತವಾದ ಕಾಣಿಕೆಗಳನ್ನೂ, ಯಾಜಕರಿಗೆ ಪ್ರತ್ಯೇಕಿಸಿದ ಅರ್ಪಣೆಗಳನ್ನೂ ನಿಮ್ಮ ಊರುಗಳಲ್ಲಿ ತಿನ್ನಬೇಡಿರಿ.