Deuteronomy 12:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ಆ ಪ್ರಾಂತ್ಯದಲ್ಲಿ ವಾಸಿಸುತ್ತಿರುವ ಜನರಿಂದ ತೆಗೆದುಕೊಂಡು ನಿಮಗೆ ಅದನ್ನು ಕೊಡುತ್ತಾನೆ. ಅಲ್ಲಿ ನೀವು ಹೋದಾಗ ಆ ಜನರ ವಿಗ್ರಹಾರಾಧನೆಯ ಸ್ಥಳಗಳನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅವರ ಪೂಜಾಸ್ಥಳಗಳು ಎತ್ತರವಾದ ಬೆಟ್ಟಗುಡ್ಡಗಳ ಮೇಲೆಯೂ ಹಸುರಾಗಿರುವ ಮರದ ಕೆಳಗೂ ಇರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ, ದಿಣ್ಣೆಗಳ ಮೇಲೆಯೂ ಹರಡಿಕೊಂಡು, ಮರಗಳ ಕೆಳಗೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ತಪ್ಪದೆ ನಾಶಮಾಡಬೇಕು.
Kannada BSI Bible 2016
ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ ದಿನ್ನೆಗಳ ಮೇಲೆಯೂ ಹರಡಿಕೊಂಡ ಮರಗಳ ಕೆಳಗೆಯೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.
Kannada Bible (KNCL) BSI 2016
“ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸ್ವಾಧೀನ ಮಾಡಿಕೊಳ್ಳುವ ದೇಶದ ಜನಾಂಗಗಳು ತಮ್ಮ ದೇವರುಗಳಿಗೆ ಪೂಜಿಸಿದ ಸ್ಥಳಗಳನ್ನೂ, ಬೆಟ್ಟಗಳ ಮೇಲಿನ ಎತ್ತರ ಸ್ಥಳಗಳನ್ನೂ, ಗುಡ್ಡಗಳ ಹಾಗು ಮರಗಳ ಕೆಳಗಿರುವ ಸ್ಥಳಗಳನ್ನು ನೀವು ಪೂರ್ಣವಾಗಿ ನಾಶಮಾಡಬೇಕು.