Deuteronomy 12:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ರಕ್ತವನ್ನು ಮಾತ್ರ ತಿನ್ನಬಾರದು. ಯಾಕೆಂದರೆ ರಕ್ತವು ಪ್ರಾಣಕ್ಕೆ ಆಧಾರ. ಮಾಂಸದಲ್ಲಿ ಇನ್ನೂ ಜೀವಕಣಗಳು ಇರುವುದರಿಂದ ರಕ್ತದೊಂದಿಗೆ ಮಾಂಸವನ್ನು ತಿನ್ನಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ರಕ್ತವು ಜೀವಾಧಾರವಾದ್ದರಿಂದ ಮಾಂಸದೊಡನೆ ರಕ್ತವನ್ನು ತಿನ್ನಲೇ ಕೂಡದೆಂಬುದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ.
Kannada BSI Bible 2016
ರಕ್ತವನ್ನು ಮಾತ್ರ ತಿನ್ನದ ಹಾಗೆ ಜಾಗ್ರತೆ ಯಾಗಿರು; ಯಾಕಂದರೆ ರಕ್ತವು ಪ್ರಾಣವೇ, ಮತ್ತು ಪ್ರಾಣವನ್ನು ಮಾಂಸದ ಸಂಗಡ ತಿನ್ನಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ರಕ್ತವು ಜೀವಾಧಾರವಾದದರಿಂದ ಮಾಂಸದೊಡನೆ ರಕ್ತವನ್ನು ಭುಜಸಲೇ ಕೂಡದೆಂಬದನ್ನು ಜ್ಞಾಪಕದಲ್ಲಿಡಿರಿ. ಪಶುಮಾಂಸದೊಡನೆ ಅದರ ಜೀವಾಧಾರವಾದದ್ದನ್ನೂ ತಿನ್ನಬಾರದಷ್ಟೆ;
Kannada Bible (KNCL) BSI 2016
“ಆದರೆ ರಕ್ತ ಜೀವಾಧಾರವಾದುದರಿಂದ ಮಾಂಸದೊಡನೆ ರಕ್ತವನ್ನು ಸೇವಿಸಲೇಕೂಡದೆಂಬುದನ್ನು ಜ್ಞಾಪಕದಲ್ಲಿಡಿ. ಮಾಂಸದೊಡನೆ ಅದರ ಜೀವಾಧಾರವನ್ನು ತಿನ್ನಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಕ್ತವನ್ನು ಮಾತ್ರ ಭುಜಿಸದ ಹಾಗೆ ಜಾಗ್ರತೆಯಾಗಿರಿ. ಏಕೆಂದರೆ ರಕ್ತವು ಪ್ರಾಣವೇ. ಮಾಂಸದೊಡನೆ ಅದರ ಜೀವವನ್ನು ತಿನ್ನಬಾರದು.