Deuteronomy 12:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ನಿಮ್ಮ ದೇವರಿಗೆ ವಿಶೇಷ ಕಾಣಿಕೆಗಳನ್ನು ಸಮರ್ಪಿಸಲು ಇಷ್ಟಪಟ್ಟರೆ ಆಗ ನೀವು ದೇವರು ಆರಿಸಿರುವ ಸ್ಥಳಕ್ಕೆ ಹೋಗಿ ಅಲ್ಲಿ ಅದನ್ನು ಸಮರ್ಪಿಸಿರಿ. ನಿಮ್ಮ ಸರ್ವಾಂಗಹೋಮವನ್ನೂ ಆ ಸ್ಥಳದಲ್ಲಿಯೇ ಸಮರ್ಪಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.
Kannada BSI Bible 2016
ನಿನಗಿರುವ ಪರಿಶುದ್ಧವಾದವುಗಳನ್ನೂ ನಿನ್ನ ಪ್ರಮಾಣಗಳನ್ನೂ ಮಾತ್ರ ಕರ್ತನು ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿಮ್ಮ ಬಳಿಯಲ್ಲಿರುವ ದೇವರ ವಸ್ತುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವನು ಆದುಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.
Kannada Bible (KNCL) BSI 2016
“ಆದರೆ ನಿಮ್ಮ ಬಳಿಯಿರುವ ದೇವರ ವಸ್ತುಗಳನ್ನು ಹಾಗು ಹರಕೆಮಾಡಿದ್ದನ್ನೂ ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗಿರುವ ಪರಿಶುದ್ಧವಾದವುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.