Deuteronomy 12:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಬೇರೆಯವರ ದೇಶವನ್ನು ವಶಪಡಿಸಿಕೊಳ್ಳಲು ಹೋಗುತ್ತಿದ್ದೀರಿ. ನಿಮ್ಮ ದೇವರಾದ ಯೆಹೋವನು ಆ ಜನರನ್ನು ನಿಮಗಾಗಿ ನಾಶಮಾಡುವನು. ಆ ಜನರನ್ನು ಅಲ್ಲಿಂದ ಹೊಡೆದೋಡಿಸಿ ಅವರ ಸ್ಥಳದಲ್ಲಿ ನೀವು ವಾಸಿಸುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ಮೇಲೆ ನೀವು ಅವರ ದೇಶವನ್ನು ವಶಮಾಡಿಕೊಂಡು ಅದರಲ್ಲಿ ವಾಸವಾಗಿರುವಾಗ
Kannada BSI Bible 2016
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ನಾಶಮಾಡಿದ ತರುವಾಯ ನೀವು ಅವರ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಾಗ
Kannada Bible (KNCL) BSI 2016
“ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನ ಜನಾಂಗಗಳನ್ನು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮುಂದೆ ನಾಶಮಾಡಿದ ತರುವಾಯ, ನೀವು ಅವರ ನಾಡನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಮುತ್ತಿಗೆ ಹಾಕಿ ವಶಪಡಿಸಿಕೊಳ್ಳಲಿಕ್ಕಿರುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವ ದೇವರು ತೆಗೆದುಹಾಕುವರು. ನೀವು ಅವರನ್ನು ಹೊರಗೆ ಓಡಿಸಿ, ಅಲ್ಲಿ ನೀವು ನೆಲೆಸಿದಾಗ,