Deuteronomy 12:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಅವರ ಯಜ್ಞವೇದಿಕೆಗಳನ್ನು ಪುಡಿಪುಡಿಮಾಡಿ, ಅವರ ಸ್ಮಾರಕ ಕಲ್ಲುಗಳನ್ನು ಕೆಡವಬೇಕು. ಅವರ ಅಶೇರ ಕಂಬಗಳನ್ನು ಸುಟ್ಟುಬಿಡಬೇಕು ಮತ್ತು ದೇವರುಗಳ ವಿಗ್ರಹಗಳನ್ನು ಕತ್ತರಿಸಿಹಾಕಬೇಕು. ಹೀಗೆ ನೀವು ಅವುಗಳ ಹೆಸರನ್ನು ಆ ಸ್ಥಳದಿಂದ ನಿರ್ಮೂಲ ಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.
Kannada BSI Bible 2016
ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು ಅವರ ದೇವತಾಪ್ರತಿಮೆಗಳನ್ನು ಕಡಿದು ಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.
Kannada Bible (KNCL) BSI 2016
ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲುಕಂಬಗಳನ್ನು ಒಡೆಯಬೇಕು; ಅಶೇರ ಎಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾ ಪ್ರತಿಮೆಗಳನ್ನು ಪುಡಿಪುಡಿಮಾಡಿ ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ, ಅವರ ಕಲ್ಲುಸ್ತಂಭಗಳನ್ನು ಒಡೆದು, ಅವರ ಆಶೇರ್ ಸ್ತಂಭಗಳನ್ನು ಬೆಂಕಿಯಿಂದ ಸುಟ್ಟು, ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ, ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ತೆಗೆದುಹಾಕಬೇಕು.