Deuteronomy 12:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ದೇವರಾದ ಯೆಹೋವನಿಗೆ ನೀವು ಆ ರೀತಿ ಮಾಡಬಾರದು. ಆ ರೀತಿಯಾಗಿ ಆತನನ್ನು ಆರಾಧಿಸಬಾರದು. ಯಾಕೆಂದರೆ ಅವರು ತಮ್ಮ ದೇವರೆದುರಿನಲ್ಲಿ ಅಸಹ್ಯವಾದ ಕಾರ್ಯಗಳನ್ನು ಮಾಡುತ್ತಾರೆ. ಅದನ್ನು ನಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ. ಅವರು ತಮ್ಮ ಮಕ್ಕಳನ್ನೇ ದೇವರಿಗೆ ಬಲಿ ಅರ್ಪಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಗೆ ಅಸಹ್ಯವಾಗಿರುವ ಹಲವು ಕೆಟ್ಟಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ. ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.
Kannada BSI Bible 2016
ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.
Kannada Bible (KNCL) BSI 2016
ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.