Deuteronomy 12:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲಿಗೆ ನೀವು ನಿಮ್ಮ ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ನಿಮ್ಮ ಬೆಳೆಗಳಲ್ಲಿ ಮತ್ತು ಪಶುಗಳಲ್ಲಿ ದಶಾಂಶವನ್ನು, ನಿಮ್ಮ ವಿಶೇಷ ಕಾಣಿಕೆಗಳನ್ನು, ಯೆಹೋವನಿಗೆ ನೀವು ಹರಕೆ ಹೊತ್ತುಕೊಂಡ ಯಾವುದೇ ಕಾಣಿಕೆಗಳನ್ನು, ನೀವು ಕೊಡಲಿಚ್ಛಿಸುವ ಯಾವುದೇ ವಿಶೇಷ ಕಾಣಿಕೆಗಳನ್ನು, ನಿಮ್ಮ ಮಂದೆ ಮತ್ತು ಹಿಂಡುಗಳ ಚೊಚ್ಚಲುಮರಿಗಳನ್ನು ತರಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.
Kannada BSI Bible 2016
ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು
Kannada Bible (KNCL) BSI 2016
ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು.