Deuteronomy 13:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 9
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಜನರೆಲ್ಲರೂ ಕೈಹಾಕಲಿ, ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.
Kannada BSI Bible 2016
ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಜನರೆಲ್ಲರೂ ಹಾಕಲಿ. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.
Kannada Bible (KNCL) BSI 2016
ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆ ಮಾಡಿ, ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಯೆಹೋವ ದೇವರ ಆಶ್ರಯದಿಂದ ಅಂಥವರು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ, ಅಂಥವರನ್ನು ಕಲ್ಲು ಎಸೆದು ಕೊಲ್ಲಬೇಕು.