Deuteronomy 13:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಆ ಪಟ್ಟಣದ ಜನರನ್ನು ದಂಡಿಸಬೇಕು; ಅವರೆಲ್ಲರನ್ನೂ ಕೊಲ್ಲಬೇಕು; ಅವರ ಎಲ್ಲಾ ಪಶುಗಳನ್ನು ಸಹ ಕೊಲ್ಲಬೇಕು. ಆ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಜವೆಂದು ತಿಳಿದುಬಂದರೆ ಆ ಊರನ್ನು ಸಂಪೂರ್ಣವಾಗಿ ಹಾಳು ಮಾಡಿ, ಅದರಲ್ಲಿರುವ ಎಲ್ಲಾ ಜನರನ್ನೂ, ದನಗಳನ್ನೂ ಕತ್ತಿಯಿಂದ ಸಂಹರಿಸಿಡಬೇಕು.
Kannada BSI Bible 2016
ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಿ ಅದರಲ್ಲಿರುವ ಎಲ್ಲಾ ಜನರನ್ನೂ ದನಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.
Kannada Bible (KNCL) BSI 2016
ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅದರಲ್ಲಿ ಇರುವ ಎಲ್ಲ ಜನರನ್ನೂ ಜಾನುವಾರುಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಊರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅದನ್ನೂ, ಅದರಲ್ಲಿರುವ ಎಲ್ಲದನ್ನೂ, ಅದರ ಪಶುಗಳನ್ನೂ ಸಹ ಶಪಿಸಿ ಖಡ್ಗದಿಂದ ನಿರ್ಮೂಲ ಮಾಡಬೇಕು.