Deuteronomy 13:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಆ ಪಟ್ಟಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಪಟ್ಟಣದ ಮಧ್ಯದಲ್ಲಿ ತಂದುಹಾಕಿ ಅದಕ್ಕೆ ಬೆಂಕಿಹೊತ್ತಿಸಿ ಇಡೀ ಪಟ್ಟಣವನ್ನು ಬೆಂಕಿಯಿಂದ ಸುಡಬೇಕು. ಇದು ದೇವರಾದ ಯೆಹೋವನಿಗೆ ೆಯೇ ಇವನನ್ನು ಸೋಲಿಸೆ.ಯೇ ಇವನನ್ನು ಸೋಲಿಸೆ.ನ ದೇಶವನ್ನೂ ನಿನಗೊಪ್ಪಿಸುವೆನು. ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ರಾಸರ್ವಾಂಗಹೋಮವಾಗುವುದು. ಆ ಪಟ್ಟಣವು ಕಲ್ಲುಗಳ ರಾಶಿಯಾಗಿ ಪರಿಣಮಿಸುವುದು ಮತ್ತು ಯಾರೂ ಆ ಪಟ್ಟಣವನ್ನು ಮತ್ತೆ ಕಟ್ಟಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ಸಂಪೂರ್ಣವಾಗಿ ಸುಟ್ಟುಬಿಡಬೇಕು. ಅದು ಪುನಃ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.
Kannada BSI Bible 2016
ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.
Kannada Bible (KNCL) BSI 2016
ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆ ಊರಿನ ಎಲ್ಲಾ ಸಾಮಗ್ರಿಗಳನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ, ಆ ಪಟ್ಟಣವನ್ನೂ, ಅದರ ಎಲ್ಲಾ ವಸ್ತುವನ್ನೂ ಸಂಪೂರ್ಣವಾಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಯಾಗಿ ಸುಟ್ಟುಬಿಡಬೇಕು. ಅದು ಎಂದಿಗೂ ಹಾಳುದಿಬ್ಬವಾಗಿರಬೇಕು; ಇನ್ನು ಮೇಲೆ ಅದನ್ನು ಕಟ್ಟಬಾರದು; ಆ ಶಾಪಗ್ರಸ್ತ ವಸ್ತುಗಳಲ್ಲಿ ಏನನ್ನೂ ತೆಗೆದುಕೊಳ್ಳಬಾರದು.