Deuteronomy 13:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂಥ ಮನುಷ್ಯರಿಗೆ ಕಿವಿಗೊಡಬೇಡಿ. ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ. ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪ್ರೀತಿಸುತ್ತೀರೊ ಇಲ್ಲವೊ ಎಂದು ನಿಮ್ಮನ್ನು ಪರೀಕ್ಷಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ನಿಮ್ಮ ದೇವರಾದ ಯೆಹೋವನು, “ಇವರು ಸಂಪೂರ್ಣ ಹೃದಯದಿಂದಲೂ ಮತ್ತು ಸಂಪೂರ್ಣ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ” ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.
Kannada BSI Bible 2016
ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೆಹೋವನು - ಇವರು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ತನ್ನನ್ನೇ ಪ್ರೀತಿಸುವವರು ಹೌದೋ ಅಲ್ಲವೋ ಎಂಬದನ್ನು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾನೆ.
Kannada Bible (KNCL) BSI 2016
ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.