Deuteronomy 13:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
Kannada BSI Bible 2016
ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
Kannada Bible (KNCL) BSI 2016
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.