Deuteronomy 13:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ಹತ್ತಿರದ ಸಂಬಂಧಿಕರಲ್ಲಿ ಯಾರಾದರೂ ಇತರ ದೇವರುಗಳನ್ನು ಅನುಸರಿಸಲು ನಿಮ್ಮನ್ನು ಗುಪ್ತವಾಗಿ ಒತ್ತಾಯ ಮಾಡಬಹುದು. ಅವರು ನಿಮ್ಮ ಸ್ವಂತ ಸಹೋದರನಾಗಿರಬಹುದು, ನಿಮ್ಮ ಮಕ್ಕಳಾಗಿರಬಹುದು, ನಿಮ್ಮ ಹೆಂಡತಿಯಾಗಿರಬಹುದು, ಅಥವಾ ಆಪ್ತಗೆಳೆಯನಾಗಿರಬಹುದು. ಅವರು ಬಂದು, ‘ಬಾ, ನಾವು ಬೇರೆ ದೇವರನ್ನು ಹಿಂಬಾಲಿಸೋಣ’ (ಈ ದೇವರನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ತಿಳಿದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,
Kannada BSI Bible 2016
ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
Kannada BSI JV (ಕನ್ನಡ ಸತ್ಯವೇದವು J.V. (BSI))
ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -
Kannada Bible (KNCL) BSI 2016
“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು