Deuteronomy 13:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವು ನಿಮ್ಮ ಸುತ್ತಮುತ್ತಲಿರುವ ಬೇರೆ ದೇಶಗಳಲ್ಲಿ ವಾಸವಾಗಿರುವ ಜನರ ದೇವರುಗಳು, ಅವುಗಳಲ್ಲಿ ಕೆಲವು ಹತ್ತಿರದವುಗಳಾಗಿವೆ; ಕೆಲವು ದೂರದವುಗಳಾಗಿವೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ, ದೂರವಾದವರ ದೇವರುಗಳಾದರೂ, ಭೂಲೋಕದ ಯಾವ ಭಾಗದವರ ದೇವರುಗಳಾದರೂ
Kannada BSI Bible 2016
ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಅಂತರಂಗದಲ್ಲಿ ನಿಮಗೆ ಬೋಧಿಸಿದರೆ ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾದರೂ ದೂರವಾದವರ ದೇವರುಗಳಾದರೂ ಭೂಲೋಕದ ಯಾವ ಭಾಗದವರ ದೇವರುಗಳಾದರೂ ನೀವು ಸಮ್ಮತಿಸಲೂಬಾರದು ಕಿವಿಗೊಡಲೂಬಾರದು.
Kannada Bible (KNCL) BSI 2016
ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾಗಿದ್ದರೂ ದೂರವಾದವರ ದೇವರುಗಳಾಗಿದ್ದರೂ ಭೂಲೋಕದ ಯಾವ ಭಾಗದವರ ದೇವರುಗಳಾಗಿದ್ದರೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮಗೆ ಸಮೀಪವಾಗಲಿ, ನಿಮಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯವರೆಗೆ ನಿಮ್ಮ ಸುತ್ತಲಿರುವ ಜನರ ದೇವರುಗಳನ್ನು ಸೇವಿಸೋಣ,” ಎಂದು ನಿಮ್ಮನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ,