Deuteronomy 14:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ನಿಮ್ಮ ದೇವರಾದ ಯೆಹೋವನ ಮಕ್ಕಳು. ನಿಮ್ಮಲ್ಲಿ ಯಾರಾದರೂ ಸತ್ತರೆ ನೀವು ತಲೆಬೋಳಿಸಿಕೊಂಡಾಗಲಿ ನಿಮ್ಮನ್ನು ಕತ್ತರಿಸಿಕೊಂಡಾಗಲಿ ನಿಮ್ಮ ದುಃಖವನ್ನು ಪ್ರದರ್ಶಿಸಕೂಡದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.
Kannada BSI Bible 2016
ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.
Kannada Bible (KNCL) BSI 2016
“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಕ್ಕಳು. ಆದುದರಿಂದ ಸತ್ತವರಿಗಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು; ನಿಮ್ಮ ಮುಂದಲೆಯನ್ನು ಬೋಳಿಸಿಕೊಳ್ಳಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನಿಮ್ಮ ದೇವರಾದ ಯೆಹೋವ ದೇವರ ಮಕ್ಕಳು. ನೀವು ಸತ್ತವರಿಗೋಸ್ಕರ ಗಾಯಮಾಡಿಕೊಳ್ಳಬಾರದು. ಮುಂದಲೆಯನ್ನು ಬೋಳಿಸಿಕೊಳ್ಳಬಾರದು.