Deuteronomy 14:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ನೀವು ಬೇರೆಯವರಿಗಿಂತ ವಿಭಿನ್ನರು. ನೀವು ಯೆಹೋವನ ವಿಶೇಷ ಜನರಾಗಿದ್ದೀರಿ. ಲೋಕದ ಎಲ್ಲಾ ಜನರಲ್ಲಿ ಯೆಹೋವನು ನಿಮ್ಮನ್ನು ತನ್ನ ಸ್ವಕೀಯ ಜನಾಂಗವನ್ನಾಗಿ ಆರಿಸಿಕೊಂಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
Kannada BSI Bible 2016
ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಜನರೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವದಕ್ಕೆ ಆದುಕೊಂಡಿದ್ದಾನಲ್ಲಾ.
Kannada Bible (KNCL) BSI 2016
ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.