Deuteronomy 14:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದುವೇಳೆ ಆ ವಿಶೇಷ ಸ್ಥಳವು ನೀವು ಪ್ರಯಾಣ ಮಾಡಲಾರದಷ್ಟು ದೂರವಾಗಿದ್ದರೆ, ಯೆಹೋವನು ಆಶೀರ್ವದಿಸಿದ ನಿಮ್ಮ ಎಲ್ಲಾ ಬೆಳೆಗಳಲ್ಲಿ ದಶಾಂಶವನ್ನು ಅಲ್ಲಿಗೆ ಕೊಂಡೊಯ್ಯಲು ಸಾಧ್ಯವಾಗದಿದ್ದಲ್ಲಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನು ಉಂಟುಮಾಡಿದ ಕಾಲದಲ್ಲಿ,
Kannada BSI Bible 2016
ನೀನು ಅವುಗಳನ್ನು ತೆಗೆದುಕೊಂಡು ಹೋಗದ ಹಾಗೆ ನಿನಗೆ ದಾರಿ ದೂರವಾದರೆ ಇಲ್ಲವೆ ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳವು ನಿನಗೆ ದೂರವಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಮೇಲೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ದೇವರಾದ ಯೇಹೋವನು ಆದುಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವದು ಅಸಾಧ್ಯವಾದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನುಂಟುಮಾಡಿದ ಕಾಲದಲ್ಲಿ
Kannada Bible (KNCL) BSI 2016
“ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಭಿವೃದ್ಧಿಯನ್ನುಂಟುಮಾಡುವ ಕಾಲದಲ್ಲಿ ಅವುಗಳನ್ನು ಮಾರಿಬಿಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕಾಣಿಕೆಗಳನ್ನು ತೆಗೆದುಕೊಂಡು ಹೋಗುವುದಕ್ಕೆ ನಿಮಗೆ ದಾರಿ ದೂರವಾಗಿದ್ದರೆ, ಅಥವಾ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾಗಿದ್ದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ ಕಾಲದಲ್ಲಿ,