Deuteronomy 14:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ನಿಮಗೆ ಬೇಕಾದ ದನಕುರಿಗಳನ್ನು ಮತ್ತು ನಿಮಗೆ ಬೇಕಾಗುವ ಆಹಾರವಸ್ತುಗಳನ್ನು ಮತ್ತು ಪಾನೀಯಗಳನ್ನು ಆ ಹಣದಿಂದ ಖರೀದಿಮಾಡಿ ನೀವೂ ನಿಮ್ಮ ಕುಟುಂಬದವರೂ ನಿಮ್ಮ ದೇವರಾದ ಯೆಹೋವನ ಆ ಸ್ಥಳದಲ್ಲಿ ತಿಂದು ಸಂತೋಷಪಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಆ ಹಣದಿಂದ ಕೊಂಡುಕೊಂಡು, ನೀವೂ ಮತ್ತು ನಿಮ್ಮ ಮನೆಯವರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.
Kannada BSI Bible 2016
ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಕೊಂಡುಕೊಂಡು ನೀವೂ ನಿಮ್ಮ ಮನೆಯವರೂ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.
Kannada Bible (KNCL) BSI 2016
ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಕೊಂಡುಕೊಂಡು ನೀವೂ ನಿಮ್ಮ ಮನೆಯವರೂ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ, ಮೊದಲಾದವುಗಳನ್ನು ಹಣದಿಂದ ಕೊಂಡುಕೊಂಡು ನೀವೂ, ನಿಮ್ಮ ಮನೆಯವರೂ, ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಊಟಮಾಡಿ, ಸಂತೋಷವಾಗಿರಬೇಕು.