Deuteronomy 15:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬಡ ಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
Kannada BSI Bible 2016
ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.
Kannada Bible (KNCL) BSI 2016
ಕೊಡುವಾಗ ನೀವು ಬೇಸರಗೊಳ್ಳದೆ ಉದಾರ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲೂ ಪ್ರಯತ್ನಗಳಲ್ಲೂ ನಿಮ್ಮನ್ನು ಅಭಿವೃದ್ಧಿಪಡಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಡುವಾಗ ಬೇಸರಗೊಳ್ಳದೇ ಉದಾರಮನಸ್ಸಿನಿಂದ ಕೊಡಿರಿ. ಏಕೆಂದರೆ ಇದಕ್ಕೋಸ್ಕರವೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ, ನೀವು ಕೈಹಾಕುವುದೆಲ್ಲದರಲ್ಲಿಯೂ ಆಶೀರ್ವದಿಸುವರು.